Friday, September 25, 2020

ಎಸ್.ಪಿ.ಬಿ ನಿಧನಕ್ಕೆ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕರಾದ ಡಾ. ವಚನ ಕುಮಾರಸ್ವಾಮಿ ಮತ್ತು‌ ರೂಪ ಕುಮಾರಸ್ವಾಮಿ ಸಂತಾಪ



 ಎಸ್.ಪಿ.ಬಿ ನಿಧನಕ್ಕೆ ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕರಾದ ಡಾ. ವಚನ ಕುಮಾರಸ್ವಾಮಿ ಮತ್ತು ರೂಪ ಕುಮಾರಸ್ವಾಮಿ ಸಂತಾಪ

ನಕ್ಕರೇ ಅದೇ ಸ್ವರ್ಗ ಸಿನಿಮಾದ ಮೂಲಕ ಕನ್ನಡ ಚಲನಚಿತ್ರ ಗೀತೆಯನ್ನು ಹಾಡಲು ಪ್ರಾರಂಭಿಸಿದ ಎಸ್.ಪಿ. ಬಾಲಸುಬ್ರಹ್ಮಣ್ಯಂರವರು ದೂರದರ್ಶನದಲ್ಲಿ ಎದೆ ತುಂಬಿ ಹಾಡುವೆನು ಎಂಬ ಕಾರ್ಯಕ್ರಮದ ಪ್ರಾರಂಭದಲ್ಲಿ ಒಂದು ವಚನವನ್ನು ಗಾಯನ ಮಾಡುವುದರ ಮೂಲಕ ಕೋಟ್ಯಾಂತರ ಕನ್ನಡಾಭಿಮಾನಿಗಳ ಮನಸ್ಸನ್ನು ಗೆದ್ದವರು. ಪುಟ್ಟ ಮಕ್ಕಳಿಂದ ಹಿಡಿದು ಸಂಗೀತ ದಿಗ್ಗಜರವರೆಗೆ ಹಿರಿಯರು ಕಿರಿಯರೆನ್ನದೆ ಎಲ್ಲರನ್ನೂ ಗೌರವಯುತವಾಗಿ ಕಾಣುತ್ತಿದ್ದ ಇವರು ಸಂಗೀತ ನಿರ್ದೇಶಕರಾಗಿ, ನಟರಾಗಿ, ನಿರ್ಮಾಪಕರಾಗಿ, ಕಂಠದಾನ ಕಲಾವಿದರಾಗಿ ಅಪಾರ ಸಾಧನೆ ಮಾಡಿದ ಇವರ ಅಗಲಿಕೆ ಸಂಗೀತ ಅಭಿಮಾನಿಗಳಿಗೆ ತುಂಬಲಾರದ ನಷ್ಟವಾಗಿದೆ. ಇವರ ಗಾಯನದ ಕನ್ನಡ ಚಲನಚಿತ್ರಗೀತೆ, ಭಕ್ತಿಗೀತೆ, ಭಾವಗೀತೆ ಹಾಗೂ ವಚನಗಳು ಸಂಗೀತಪ್ರಿಯರ ಮನದಂಗಳದಲ್ಲಿ ಶಾಶ್ವತವಾಗಿ ಉಳಿಯುವುದರ ಮೂಲಕ  ಕೀರ್ತಿಶೇಷರಾಗಿದ್ದಾರೆ. ಇವರಿಗೆ ಸದ್ಗತಿ ದೊರೆಯಲಿ ಇವರ ಅಭಿಮಾನಿಗಳು ಹಾಗೂ ಕುಟುಂಬಕ್ಕೆ ದುಃಖ ತಡೆಯುವ ಶಕ್ತಿಯನ್ನು ಪರಶಿವ ಕರುಣಿಸಲಿ ಎಂದು ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕರಾದ ಡಾ. ವಚನ ಕುಮಾರಸ್ವಾಮಿ ಮತ್ತು ರೂಪ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ.



No comments:

Post a Comment